ಸೌಜನ್ಯ ಹಾಗೂ ಅನನ್ಯ ಭಟ್ ಸೇರಿದಂತೆ ಎಲ್ಲರಿಗೂ ನ್ಯಾಯ ಒದಗಿಸಲು ನಿಷ್ಪಕ್ಷಪಾತ ತನಿಖೆಗೆ AIDSO ಆಗ್ರಹ!
ಇಡೀ ದೇಶದ ಜನತೆ ಬೆಚ್ಚಿ ಬೀಳುವಂತಹ ಹಲವು ಕೊಲೆ ಹಾಗೂ ಅತ್ಯಾಚಾರದ ಪ್ರಕರಣಗಳು ಧರ್ಮಸ್ಥಳದಲ್ಲಿ ನಡೆದಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಈ ಎಲ್ಲಾ ಅಪರಾಧ ಪ್ರಕರಣಗಳ ಕುರಿತು ಎಸ್ಐಟಿ ಯು ಯಾವುದೇ ಒತ್ತಡಗಳಿಗೆ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿ, ಎಐಡಿಎಸ್‌ಓ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.